Album : ಗಾಳಿಪಟ
Actors : ಗಣೇಶ್
Lyricist : ಜಯಂತ್ ಕೈಕೀನಿ
Copyright Holder : ವೀ ಹರಿಕೃಷ್ಣ
Singers : ಸೋನು ನಿಗಮ
Created on : 01/18/2008
Language : ಕನ್ನಡ
Title : ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
Text : ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ.. ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೇ ಚಳಿಗಾಲ..
Minchaagi Neenu Baralu Lyrics in Kannada
ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೋತೆಗಿರಲು ಕೂತಲ್ಲಿಯೇ ಛಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೆಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ….
ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೋತೆಗಿರಲು ಕೂತಲ್ಲಿಯೇ ಛಳಿಗಾಲ
ನಾ ನಿನ್ನ ಕನಸಿಗೆ ಚಂದದಾರನು
ಚಂದ ಬಾಕಿ ನೀಡಲು ಬಂದೆ ಬರುವೆನು
ನಾ ನೇರ ಹೃದಯದ ವರದಿಗಾರನು
ನಿನ್ನ ಕಂಡ ಕ್ಷಣದಲೇ ಮಾತೆ ಮರೆವೆನು
ಕ್ಷಮಿಸು ನೀ ಕಿನ್ನರಿ, ನುಡಿಸಲೇ ನಿನ್ನನು
ಹೇಳಿ ಕೇಳಿ ಮೊದಲೇ ಚೂರು ಪಾಪಿ ನಾನು
ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೋತೆಗಿರಲು ಕೂತಲ್ಲಿಯೇ ಛಳಿಗಾಲ
ನಿನ್ನ ಮನದ ಕವಿತೆ ಸಾಲ ಪಡೆವ ನಾನು ಸಾಲಗಾರ
ಕಣ್ಣ ತೆರೆದು ದೋಚಿಕೊಂಡ ನೆನಪುಗಳಿಗೆ ಪಾಲುದಾರ
ನನ್ನದೀ ವೇದನೆ ನಿನಗೆ ನಾ ನೀಡೆನು
ಹೇಳಿ ಕೇಳಿ ಮೊದಲೇ ಚೂರು ಕಳ್ಳ ನಾನು
ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೋತೆಗಿರಲು ಕೂತಲ್ಲಿಯೇ ಛಳಿಗಾಲ
Leave a Reply